Kannada NewsKarnataka NewsNational

*ಶಾಸಕ ಕೆ. ಷಡಕ್ಷರಿ ಆರೋಗ್ಯ ವಿಚಾರಿಸಿದ ಸಿಎಂ ಡಿಕೆ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ: ಸಚಿವ ಸ್ಥಾನಕ್ಕಾಗಿ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ತಿಪಟೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ ಕಂಡುಬಂದಿದ್ದು ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದ ಶಾಸಕ ಕೆ. ಷಡಕ್ಷರಿ ಅವರು ಗುರುವಾರ ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಜೊತೆ ಚಹಾ ಸೇವಿಸುತ್ತಾ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. 

ಶಾಸಕರ ಸ್ಥಿತಿಯನ್ನು ಗಮನಿಸಿದ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು, ಎಂಎಲ್‌ಸಿ ರಾಜೇಂದ್ರ ಅವರ ನೆರವಿನೊಂದಿಗೆ ಷಡಕ್ಷರಿ ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದರು. ಶಾಸಕರು ಹಿಂದಿನ ರಾತ್ರಿ ಸರಿಯಾಗಿ ನಿದ್ರೆ ಮಾಡದ ಕಾರಣ ರಕ್ತದೊತ್ತಡದಲ್ಲಿ  ವ್ಯತ್ಯಾಸವಾಗಿ ಈ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಡಿಸಿಎಂ ಪರಮೇಶ್ವರ್ ಅವರು ವೈದ್ಯರನ್ನು ಸಂಪರ್ಕಿಸಿ ಶಾಸಕರ ಆರೋಗ್ಯ ಸ್ಥಿತಿಯ ಕುರಿತು ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಶಾಸಕರು ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಧಾವಿಸಿ ಷಡಕ್ಷರಿ ಅವರನ್ನು ಭೇಟಿಯಾದರು. ಶಾಸಕರ ಆರೋಗ್ಯ ಸ್ಥಿತಿಯನ್ನು ವೈದ್ಯರಿಂದ ತಿಳಿದುಕೊಂಡ ಸಿಎಂ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಅತ್ಯುತ್ತಮ ಹಾಗೂ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ವೈದ್ಯಕೀಯ ತಂಡಕ್ಕೆ ಸೂಚಿಸಿದರು.

Home add -Advt

ಸದ್ಯ ಶಾಸಕರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಮತ್ತು ಅವರು ಮಾತನಾಡುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ. 

Related Articles

Back to top button