Karnataka NewsLatestPolitics

*ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯನ್ನು ಭೇಟಿಯಾಗಿ ಚರ್ಚಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದರು. ಇದೇ ವೇಳೆ ಕೆಲ ಕಾಲ ಸಮಾಲೋಚನೆ ನಡೆಸಿದರು.

ರಾಷ್ಟ್ರಪತಿ ಭೇಟಿ ಬೆನ್ನಲ್ಲೇ ಸಿಎಂ ಡಿ ಕೆ ಶಿವಕುಮಾರ್ ಅವರು ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು.

ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದ್ದಾರೆ.

Home add -Advt

Related Articles

Back to top button