Kannada NewsKarnataka NewsLatest

*ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಹಿಂದೂ ಧರ್ಮ ಹಾಗೂ ಆರಾಧ್ಯ ದೈವ ಶ್ರೀರಾಮನ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. 

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ಜನನ ಮತ್ತು ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವರು ಆಡಿರುವ ಮಾತುಗಳು ಕೋಟ್ಯಂತರ ಹಿಂದೂಗಳ ಶ್ರದ್ಧೆ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯು ಈ ದೂರು ದಾಖಲಿಸಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.

ಈ ಹಿಂದೆಯೂ ಕೂಡ ಪ್ರೊ. ಭಗವಾನ್ ಅವರು ಶ್ರೀರಾಮ, ಶ್ರೀಕೃಷ್ಣ ಮತ್ತು ಭಗವದ್ಗೀತೆಯ ಕುರಿತು ಇಂತಹದ್ದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರು. 

Home add -Advt

ಸದ್ಯ ಅವರ ಭಾಷಣದ ವಿಡಿಯೋ ಮತ್ತು ಧ್ವನಿಮುದ್ರಣ ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ದೂರಿನೊಂದಿಗೆ ಪೊಲೀಸರಿಗೆ ಸಲ್ಲಿಸಲಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನದ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

Related Articles

Back to top button