Kannada NewsLatestNational

*BREAKING: ಭಾರತೀಯ ವಾಯುಪಡೆಯ ಎಎನ್-32 ವಿಮಾನ ಪತನ: ಐವರು ಯೋಧರು ಹುತಾತ್ಮ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ಎ ಎನ್-32 ಸಾರಿಗೆ ವಿಮಾನ ಪತನಗೊಂಡು ಬೆಂಕಿಗಾಹುತಿಯಾಗಿರುವ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಸ್ಸಾಂನ ಜೋರ್ಹತ್ ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಆಗುವ ವೇಳೆ ಏಕಾಏಕಿ ವಿಮಾನ ಪತನಗೊಂಡು ಬೆಂಕಿಗಾಹುತಿಯಾಗಿದೆ. ಈ ದುರಂತದಲ್ಲಿ ಐವರು ಯೋಧರು ಸಾವನ್ನಪ್ಪಿದ್ದಾರೆ. ಓರ್ವ ಸಹಪೈಲಟ್ ಬದುಕುಳಿದಿದ್ದಾಅರೆ.

Home add -Advt

ವಾಯುಪಡೆ ನಿಲ್ದಾಣದ ಆವರಣದಲ್ಲಿಯೇ ವಿಮಾನ ಪತನಗೊಂಡಿದೆ. ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ದುರಂತದಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ. ವಿಮಾನ ದುರಂತದ ಬಗ್ಗೆ ಉನ್ನತ ತನಿಖೆಗೆ ಆದೇಶಿಸಲಾಗಿದೆ.


Related Articles

Back to top button