Belagavi NewsBelgaum NewsKannada NewsKarnataka NewsLatest

*ಕಲುಸಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ: ಬೆಳಗಾವಿಯಲ್ಲಿ ತಡ ರಾತ್ರಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಚ್ಚೆ ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ಸರಕಾರಿ‌ ಮೇಟ್ರಿಕ್ ನಂತರದ ಬಾಲಕರ ವಸತಿ ನಿಲಯ 6ರಲ್ಲಿ ಕಲುಸಿಯ ಆಹಾರ ಸೇವನೆ ಮಾಡಿ ವಿದ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಡುವ ಪರಿಸ್ಥಿತಿ ಎದುರಾಗಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ ವಾರ್ಡನ್ ಹಾಗೂ ಮೇಲಾಧಿಕಾರಿಗಳ ವಿರುದ್ದ ಹಾಸ್ಟೆಲ್ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ಶನಿವಾರ ರಾತ್ರಿ ಆಹಾರ ಸೇವನೆ ಮಾಡಿದ ಬಳಿಕ ಹೊಟ್ಟೆ ನೋವಿನ ಸಮಸ್ಯೆ ಎದುರಾಗುತ್ತಿದ್ದು, ಇದಕ್ಕೆ ಕಲುಸಿತ ಆಹಾರ ಸೇವನೆ ಕಾರಣ ಎಂದು ಹೇಳಲಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ ಮಾಡಿ ರೋಷಿ ಹೋಗಿದ್ದಾರೆ. 

ಇಷ್ಟೇಲ್ಲಾ ಆದರೂ ಇದರ ಬಗ್ಗೆ ಮೇಲಾಧಿಕಾರಿಗಳಾಗಲಿ ಅಥವಾ ವಾರ್ಡನ್ ಆಗಲಿ ಯಾವದೇ ವಿಚಾರಣೆ ಮಾಡದೆ ನಿರ್ಲಕ್ಷ್ಯ ವಹಿಸಿರುವದರಿಂದ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

Home add -Advt

Related Articles

Back to top button