Kannada NewsNationalPolitics

*ಒಂದುವಾರ ದ್ವಿರಾಷ್ಟ್ರ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ : ಒಂದು ವಾರದ ಅವಧಿಗೆ ಪ್ರಧಾನಿ ನರೇಂದ್ರ ಮೋದಿಯವರು ಫ್ರಾನ್ಸ್ ಮತ್ತು ಪ್ಲೊವೇನಿಯಾ ದೇಶಗಳ ದ್ವಿರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ. 

ಈ ಪ್ರವಾದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ನ ನೈಸ್ ನಗರಕ್ಕೆ ತಲುಪಿದ್ದಾರೆ. ಈ ಪ್ರವಾಸದಲ್ಲಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಫ್ರಾನ್ಸ್ ತಲುಪಿದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ನೈಸ್ ನಗರದ ಜೊತೆಗೆ ಈ ಪ್ರವಾಸದಲ್ಲಿ ಎವಿಯನ್ ಮತ್ತು ಪ್ಯಾರಿಸ್ ನಗರಗಳ ಕಾರ್ಯಕ್ರಮಗಳೂ ಸೇರಿವೆ ಎಂದು ತಿಳಿಸಿದ್ದಾರೆ. ಪ್ರಮುಖ ಅಭಿವೃದ್ಧಿ ಪಾಲುದಾರ ದೇಶಗಳೊಂದಿಗೆ ಭಾರತದ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಹಲವು ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಭೆಗಳಲ್ಲಿ ಭಾಗವಹಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಫ್ರಾನ್ಸ್ ಪ್ರವಾಸದ ಈ ಹಂತ ಮುಗಿದ ಬಳಿಕ ಪ್ರಧಾನಿ ಮೋದಿ ಅವರು ಜೂನ್ 14 ಮತ್ತು 15 ರಂದು ಪ್ಲೊವೇನಿಯಾಕ್ಕೆ ಭೇಟಿ ನೀಡಲಿದ್ದಾರೆ. 1993ರಲ್ಲಿ ಪ್ಲೊವೇನಿಯಾ ಸ್ವತಂತ್ರ ರಾಷ್ಟ್ರವಾದ ಬಳಿಕ ಭಾರತದ ಪ್ರಧಾನಿಯೊಬ್ಬರು ಅಲ್ಲಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಅಲ್ಲಿ ಅವರು ಪ್ಲೊವೇನಿಯಾ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ ಮತ್ತು ಪ್ರಧಾನಿ ರಾಬರ್ಟ್ ಫಿಕೊ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

Home add -Advt

ಜೂನ್ 16 ಮತ್ತು 17 ರಂದು ಫ್ರಾನ್ಸ್‌ನ ಎವಿಯನ್ ನಗರದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಮತ್ತೆ ಫ್ರಾನ್ಸ್‌ಗೆ ಮರಳಲಿದ್ದಾರೆ. ಈ ಶೃಂಗಸಭೆಯಲ್ಲಿ ಜಾಗತಿಕ ದಕ್ಷಿಣದ ರಾಷ್ಟ್ರಗಳ ಆಶೋತ್ತರಗಳಿಗೆ ಭಾರತವು ಧ್ವನಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ. 

ಜೂನ್ 18 ರಂದು ಪ್ಯಾರಿಸ್‌ನಲ್ಲಿ ನಡೆಯಲಿರುವ ಯುರೋಪಿನ ಅತಿ ದೊಡ್ಡ ತಂತ್ರಜ್ಞಾನ ಮೇಳವಾದ ‘ವಿವಾಟೆಕ್ 2026 ರಲ್ಲೂ ಪ್ರಧಾನಿ ಭಾಗವಹಿಸಲಿದ್ದಾರೆ.

Related Articles

Back to top button