Kannada NewsLatestNational

*ಅಪಘಾತದಲ್ಲಿ ಕೆಳಗೆ ಬಿದ್ದ ಪೊಲೀಸ್ ಕಾನ್ಸ್ ಟೇಬಲ್ ಮೇಲೆಯೇ ಹರಿದ ಟ್ರಕ್: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಭೀಕರ ರಸ್ತೆ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌ವೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಕಾಶ್ಮೀರಿ ಗೇಟ್ ಐಎಸ್‌ಬಿಟಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಮೃತ ಹೆಡ್ ಕಾನ್‌ಸ್ಟೇಬಲ್‌ ರಾಜಸ್ಥಾನ ಮೂಲದ ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ.

Home add -Advt

ಶಾಂತಿ ವನದಿಂದ ಚಾಂದಗಿ ರಾಮ್ ಕಡೆಗೆ ಹೋಗುವ ರಸ್ತೆಯ ಬದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಸ್ಕೂಟರ್‌ವೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅನಿಲ್ ಕುಮಾರ್ ರಸ್ತೆಯ ಮೇಲೆ ಬಿದ್ದಿದ್ದಾರೆ. ಅದೇ ರಸ್ತೆಯಲ್ಲಿ ಹಿಂದಿನಿಂದ ಬರುತ್ತಿದ್ದ ಮಿನಿ ಟ್ರಕ್ ಅನಿಲ್ ಅವರ ಮೇಲೆ ಹರಿದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಿವಿಲ್ ಲೈನ್ಸ್ನಲ್ಲಿರುವ ಸುಶ್ರುತ್ ಟ್ರಾಮಾ ಸೆಂಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಗದೆ ಅವರು ಸಾವನ್ನಪ್ಪಿದ್ದಾರೆ.


Related Articles

Back to top button