Kannada NewsKarnataka NewsLatest

*ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ತಾಲೂಕು ಆಸ್ಪತ್ರೆ ಮಹಿಳಾ ಸಿಬ್ಬಂದಿ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಮೇಲಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಚಂದ್ರಶೇಖರ್ ಕಿರುಕುಳಕ್ಕೆ ನೊಂದು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ರಾಜೀನಾಮೆ ನೀಡಿದ್ದಾರೆ.

ಲೈಂಗಿಕ ಕಿರುಕುಳದ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ‌ ಹಾಕಿದ್ದ. ಹಿಂಸೆ ತಾಳಲಾರದೇ ಸಿಬ್ಬಂದಿಯೇ ಚಂದ್ರಶೇಖರ್ ಮುಖಕ್ಕೆ ರಾಜೀನಾಮೆ ಪತ್ರವನ್ನು ಎಸೆದಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಅಧಿಕಾರಿ ಚಂದ್ರಶೇಖರ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button