Karnataka NewsLatestPolitics

*ಸಹೋದರ ಸತೀಶ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಒಳ್ಳೆಯದಾಯಿತು ಎಂದ ರಮೇಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಚಿವ, ಸಹೋದರ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಸತೀಶ್ ಜಾರಕಿ ಲಾಭಿನಡೆಸಿದರು, ಆದರೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ.

Home add -Advt

ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನ್ನು ಹೈಕಮಾಂಡ್ ನೀಡಿತ್ತು. ಆದರೆ ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿ.ಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ರಮೇಶ್ ಜಾರಕಿಹೊಳಿ ಖುಷಿ ಪಟ್ಟಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗದೇ ಇರುವುದು ಒಳ್ಳೆಯದಾಗಿದೆ. ಕಾರಣ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಆಧ್ಯಕ್ಷ ಆಗದೇ ಇರುವಂತೆ ದೇವರೇ ಒಳ್ಳೆಯದನ್ನ ಮಾಡಿದ್ದಾನೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿದ್ದರೆ ತೊಂದರೇ ನಮಗಾಗುತ್ತಿತ್ತು ಎಂದಿದ್ದಾರೆ.

Related Articles

Back to top button