Kannada NewsKarnataka NewsLatest

*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿ ತಾಣ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ಜಲಾಶಯದಲ್ಲಿ ಈ ದುರಂತ ಸಂಭವಿಸಿದೆ. ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾಗಿದ್ದಾರೆ. . ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಮೂಲದ ಹತ್ತು ಜನ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿತ್ತು. ಶ್ರೀಕ್ಷೇತ್ರದ ದರ್ಶನ ಮುಗಿಸಿ ವಾಪಸ್ ಬರುವಾಗ ಹಾಸನ ತಾಲೂಕಿನ ಗೊರೂರು ಬಳಿಯಿರುವ ಪ್ರಸಿದ್ಧ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದರು. ಈ ವೇಳೆ ಚರ್ಚ್ ಬಳಿ ಹಿನ್ನೀರನ್ನು ಕಂಡು ಯುವಕರು ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ.

ಚರಣ್ (20), ಮಿಲನ್ (23) ಮತ್ತು ಮಣಿಕಂಠ (20) ಮೃತ ದುರ್ದೈವಿಗಳು. ಯುವಕರು ನೀರಿನಲ್ಲಿ ಮುಳುಗುತ್ತಿದ್ದಂತೆ ಆತಂಕಗೊಂಡ ಉಳಿದ ಸ್ನೇಹಿತರು, ರಕ್ಷಿಸುವಂತೆ ದಡಕ್ಕೆ ಬಂದು ಜೋರಾಗಿ ಕಿರುಚಾಡಿದ್ದಾರೆ. ಆದರೆ ಸಕಾಲಕ್ಕೆ ಯಾವುದೇ ನೆರವು ಸಿಗದ ಕಾರಣ ಮೂವರು ಯುವಕರು ಸ್ನೇಹಿತರ ಕಣ್ಣೆದುರೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Home add -Advt

Related Articles

Back to top button