Karnataka NewsLatestPolitics

*ಶಾಸಕ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲು*

ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕ, ಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಕ್ಬಾಲ್ ಹುಸೇನ್ ಹೃದಯದ ಬ್ಲಾಕೇಜ್ ನಿಂದ ಬಳಲುತ್ತಿದ್ದು ಅನಾರೋಗ್ಯಕ್ಕೀಡಾಗಿದ್ದಾರೆ. ಅವರನ್ನು ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button