Kannada NewsKarnataka NewsLatest

*ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅನಂತ್ ಅಂಬಾನಿ*

ಪ್ರಗತಿವಾಹಿನಿ ಸುದ್ದಿ: ಉಡುಪಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಪುರಾಣ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು.

ಅನಂತ ಅಂಬಾನಿ ಅವರು ದೇವಸ್ಥಾನದ ಧಾರ್ಮಿಕ ನಿಯಮಾವಳಿಗಳಿಗೆ ಅನುಗುಣವಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗರ್ಭಗುಡಿಯ ಎದುರು ಕೆಲಕಾಲ ಪ್ರಾರ್ಥನೆ ಮಾಡಿದರು.

Home add -Advt

Related Articles

Back to top button