Film & EntertainmentKannada NewsLatest

*ಖುಷಿ ಖುಷಿಯಾಗಿ ಇನ್ ಸ್ಟಾದಲ್ಲಿ ರೀಲ್ಸ್ ಅಪ್ ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ*

ಪ್ರಗತಿವಾಹಿನಿ ಸುದ್ದಿ: ಹಿಂದಿ ಕಿರುತೆರೆಯ ಖ್ಯಾತ ನಟಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ಕೇವಲ 30 ವರ್ಷದ ಸಂಚಿತಾ ಉಗಾಳೆ ಆತ್ಮಹತ್ಯೆಗೆ ನಿಖರ ಕಾರ‍ಣ ತಿಳಿದುಬಂದಿಲ್ಲ. ಭಾನುವಾರ ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿನ ತಮ್ಮ ಮನೆಯಲ್ಲಿ ಬೆಡ್‌ರೂಮ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಇಂದು ಅವರ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ ಸಮಯದಲ್ಲಿ ಸಂಚಿತಾ ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಕುಟುಂಬಸ್ಥರು ಮನೆಗೆ ಬಂದಾಗಲೇ ಆತ್ಮಹತ್ಯೆ ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಂಚಿತಾ ಆತ್ಮಹತ್ಯೆ ಮಾಡಿಕೊಳ್ಳುವ ಕೇಲವೇ ಗಂಟೆಗಳ ಮುನ್ನ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ನಲ್ಲಿ ರೀಲ್ಸ್ ಒಂದನ್ನು ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಅತ್ಯಂತ ಖುಷಿಯಾಗಿ ನಗುತ್ತಾ ಕಾಣಿಸಿಕೊಂಡಿದ್ದ ಸಂಚಿತಾ, ಇದ್ದಕ್ಕಿದ್ದಂತೆ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಂಡಿರುವುದು ಆಶ್ಚರ್ಯ ಮೂಡಿಸಿದೆ.

ಸೂಪರ್ ಹಿಟ್ ಧಾರಾವಾಹಿ ‘ಕುಂಕುಮ್ ಭಾಗ್ಯ’ದಲ್ಲಿ ದಿಯಾ ಟಂಡನ್ ಪಾತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದ್ದರು. ‘ವಾಗ್ಲೆ ಕಿ ದುನಿಯಾ’ ಮತ್ತು ನಾಯಕಿಯಾಗಿ ‘ದಿಲ್ವಾಲಿ ದುಲ್ಹಾ ಲೇ ಜಾಯೇಗಿ’ ಧಾರಾವಾಹಿಗಳಲ್ಲಿ ನಟಿಸಿದ್ದರು. ಕಿರುತೆರೆ ಅಷ್ಟೇ ಅಲ್ಲದೆ, ಮನೋಜ್ ಬಾಜಪೇಯಿ ಅವರ ‘ಸೈಲೆನ್ಸ್ 2’, ವಿಕ್ಕಿ ಕೌಶಲ್ ಅವರ ‘ಛಾವಾ’ದಲ್ಲೂ ಅವರು ನಟಿಸಿದ್ದರು.

Related Articles

Back to top button