Kannada NewsKarnataka NewsPolitics

*ಮಾವಿನ ಹಣ್ಣು ತಿಂದು ಸಹೋದರಿಯರ ಸಾವು ಪ್ರಕರಣ: ಆ ಕುಟುಂಬದ 3 ಹೆಣ್ಣು ಮಕ್ಕಳನ್ನು ದತ್ತು ಪಡೆದ ಪ್ರಭು ಚವ್ಹಾಣ್*

ಪ್ರಗತಿವಾಹಿನಿ ಸುದ್ದಿ: ಮಾವಿನ ಹಣ್ಣು ಸೇವಿಸಿ ಇಬ್ಬರು ಸಹೋದರಿಯರು ಮೃತಪಟ್ಟ ಘಟನೆ ಎಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಂತ್ರಸ್ತ ಕುಟುಂಬಕ್ಕೆ ಶಾಸಕ ಪ್ರಭು ಚೌಹಾಣ್ ನೈತಿಕ ಬೆಂಬಲವಾಗಿ ಆ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಬಡ ಕುಟುಂಬದ ದಯನೀಯ ಸ್ಥಿತಿಗೆ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಚೌಹಾಣ್ ಮಾನವೀಯತೆಯ ಆಧಾರದ ಮೇಲೆ ತಕ್ಷಣ ಸ್ಪಂದಿಸಿದ್ದಾರೆ. ದುರಂತದಿಂದ ಕಂಗಾಲಾಗಿದ್ದ ಬಡ ಪೋಷಕರ ನೆರವಿಗೆ ಧಾವಿಸಿರುವ ಶಾಸಕರು, ಆ ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ. ಈ ಹೆಣ್ಣು ಮಕ್ಕಳ ಸಂಪೂರ್ಣ ಶಿಕ್ಷಣ, ಪಾಲನೆ-ಪೋಷಣೆ ಹಾಗೂ ಭವಿಷ್ಯದ ಜವಾಬ್ದಾರಿಯನ್ನು ತಾವೇ ವಹಿಸಿಕೊಳ್ಳುವುದಾಗಿ ಪ್ರಭು ಚೌಹಾಣ್ ಭರವಸೆ ನೀಡಿದ್ದಾರೆ.

ಶಾಸಕ ಪ್ರಭು ಚೌಹಾಣ್, ಶೆಂಬೆಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕುಟುಂಬದ ಉಳಿದ ಮೂವರು ಹೆಣ್ಣು ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ಹಾಗೂ ಅವರ ಮದುವೆಯ ಜವಾಬ್ದಾರಿಯನ್ನು ತಾವೇ ವೈಯಕ್ತಿಕವಾಗಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

Home add -Advt

Related Articles

Back to top button