Kannada NewsKarnataka NewsLatest
*ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ಎಸ್ಐಟಿ ಪೊಲೀಸ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಬುರುಡೆ ಕೇಸ್ ತನಿಖೆ ನಡೆಸುತ್ತಿದ್ದ ಎಸ್ಐಟಿ ಪೊಲೀಸ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಕಾರು ಪಲ್ಟಿಯಾಗಿ ಬಿದ್ದಿದೆ. ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಖಾರಿಯಾಗಿರುವ ಜೀತೇಂದ್ರ ಕುಮಾರ್ ದಯಾಮ ಅವರನ್ನ ಭೇಟಿಯಾಗಿ ಎಸ್ ಐಟಿ ಅಧಿಕಾರಿಗಳು ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಎಸ್ಐಟಿ ಎಸ್.ಪಿ ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಹಾಗೂ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಾಶತ್ ಅಪಾಯದಿಂದ ಪಾರಾಗಿದ್ದಾರೆ.




