Kannada NewsKarnataka NewsLatest

*ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಸಾವು*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕರ ನಡುವಿನ ಜಗಳದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ದಾವಣಗೆರೆಯಲ್ಲಿ ಈ ಘಟನೆ ನಡೆದಿದೆ. ಜಾತಿ ವಿಚಾರವಾಗಿ ಶಿಕ್ಷರ ನಡುವೆ ಜಗಳ ನಡೆದಿತ್ತು. ಮುಖ್ಯಶಿಕ್ಷಕರನ್ನೇ ಸಹ ಶಿಕ್ಷಕರು, ಅಡುಗೆ ಸಹಾಯಕರು ಏಕವಚನದಲ್ಲಿ ಮಾತನಾಡಿಸುತ್ತ ಕಿರುಕುಳ ನೀಡುತ್ತಿದ್ದರು. ಇದರಿಂದ ತೀವ್ರವಾಗಿ ಮನನೊಂದಿದ್ದ ಮುಖ್ಯಶಿಕ್ಷಕ ನಿನ್ನೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜಯಪ್ಪ ಮೃತ ಶಿಕ್ಷಕ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button