Kannada NewsKarnataka NewsLatest

*ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಸಬ್ ಇನ್ಸಪೆಕ್ಟರ್ ಓರ್ವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ನಡೆದಿದೆ. ಕಲಬುರಗಿಯ ಡಿ.ಸಿ.ಆರ್.ಬಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಹೆರೂರ್ ಮೃತ ದುರ್ದೈವಿ.

Home add -Advt

2014ರ ಬ್ಯಾಚ್‌ನ ಪಿಎಸ್‌ಐ ಆಗಿದ್ದ ಮೃತ ಬಸವರಾಜ್ ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿ.ಸಿ.ಆರ್.ಬಿ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ತಡರಾತ್ರಿ ಅವರು ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಪಿಎಸ್‌ಐ ಬಸವರಾಜ್ ಅವರಿಂದ ಕರೆ ಬರುತ್ತಿದ್ದಂತೆ ಆತಂಕಗೊಂಡ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಗಾಬರಿಗೊಂಡ ತಂದೆ ತಕ್ಷಣವೇ ಮಗನ ರೂಮಿನ ಬಳಿ ಧಾವಿಸಿ, ಒಳಗಿನಿಂದ ಲಾಕ್ ಆಗಿದ್ದ ಬಾಗಿಲನ್ನು ಒಡೆದು ತೆರೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸವರಾಜ್ ಸೀರೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಭೀಕರ ಘಟನೆಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಈ ಕುರಿತು ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

Related Articles

Back to top button