ಜೂನ್ 19ರಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 18 ಮತ್ತು 19ರಂದು ಆಂಧ್ರ ಪ್ರದೇಶದ ತಿರುಮಲಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ (OSD) ಬಿ.ಎಸ್. ಶ್ರೀಧರ್ ಅವರು ಬಿಡುಗಡೆ ಮಾಡಿರುವ ಪ್ರವಾಸ ಕಾರ್ಯಕ್ರಮದ ಪ್ರಕಾರ, ಜೂನ್ 18ರಂದು ಸಂಜೆ 6.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ (VT-AMG) ಮೂಲಕ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ, ಸಂಜೆ 7.30ಕ್ಕೆ ಆಂಧ್ರ ಪ್ರದೇಶದ ರೇಣಿಗುಂಟ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ತಿರುಮಲಕ್ಕೆ ತೆರಳಿ ರಾತ್ರಿ ತಂಗಲಿದ್ದಾರೆ.
ಜೂನ್ 19ರಂದು ಬೆಳಿಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು, ಬೆಳಿಗ್ಗೆ 9 ಗಂಟೆಗೆ ತಿರುಮಲದಿಂದ ರಸ್ತೆ ಮಾರ್ಗವಾಗಿ ರೇಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 10.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿ, ಬೆಳಿಗ್ಗೆ 11.15ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಮುಖ್ಯಮಂತ್ರಿಗಳ ಈ ಪ್ರವಾಸಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಅಗತ್ಯ ಭದ್ರತೆ ಮತ್ತು ಪ್ರೋಟೋಕಾಲ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.




