Karnataka NewsLatestPolitics

*ಪರಿಷತ್ ಚುನಾವಣೆ ; ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ, ಲಕ್ಷ್ಮೀ ಹೆಬ್ಬಾಳ್ಕರ್ ಹಕ್ಕು ಚಲಾವಣೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ವಿಧಾನಸಭೆ ಸದಸ್ಯರಿಂದ ಆಯ್ಕೆಗೊಳ್ಳಲು ನಡೆದ ಚುನಾವಣೆಯಲ್ಲಿ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡು ತಮ್ಮ ಮತ ಚಲಾಯಿಸಿದರು.

ವಿಧಾನಸೌಧದ ಒಂದನೇ ಮಹಡಿಯಲ್ಲಿ ಏರ್ಪಾಟಾಗಿರುವ ಗುಪ್ತ ಮತದಾನ ಪ್ರಕ್ರಿಯೆ ಕುತೂಹಲ ಕೆರಳಿಸಿದ್ದು ಕಾಂಗ್ರೆಸ್ ಪಕ್ಷದ ಐದನೇ ಅಭ್ಯರ್ಥಿ ಗೆಲುವಿಗೆ ಪಕ್ಷದ ವತಿಯಿಂದ ರಣತಂತ್ರ ಹೂಡಲಾಗಿದೆ. ತಂತ್ರದ ಭಾಗವಾಗಿ ಕಾಂಗ್ರೆಸ್ ಶಾಸಕರಿಗೆ ಮತ ಚಲಾಯಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಈ ಕುರಿತು ಎರಡು ದಿನಗಳ ಕಾಲ ಖಾಸಗಿ ಹೊಟೇಲ್ ನಲ್ಲಿ ನಡೆದ ಪಕ್ಷದ ಶಾಸಕರ ಸಭೆ ಮತ್ತು ಸಮಾಲೋಚನೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು.

ಬಿಡದಿಯ ರೆಸಾರ್ಟ್ ನಿಂದ ಇಂದು ಬೆಳಗ್ಗೆ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹೆಬ್ಬಾಳಕರ್, ಕಾಂಗ್ರೆಸ್ ನ ಎಲ್ಲ ಐದು ಅಭ್ಯರ್ಥಿಗಳೂ ಗೆಲವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

222 ವಿಧಾನಸಭೆ ಸದಸ್ಯರು ಒಟ್ಟು ಏಳು ಮಂದಿಯನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲು ಮತದಾನ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button