
ಪ್ರಗತಿವಾಹಿನಿ ಸುದ್ದಿ: ಕೋಲಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದುಷ್ಕರ್ಮಿಗಳು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಕೋರ್ಟ್ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಶ್ವಾನದಳ, ಬಾಂಬ್ ನಿಷ್ಕ್ರಿಯದಳ, ಪೊಲೀಸರಿಂದ ಕೋರ್ಟ್ ಒಳಗೆ ಹಾಗೂ ಆವರಣದಲ್ಲಿ ಇಂಚಿಂಚು ತಪಾಸಣೆ ನಡೆಸಲಾಗುತ್ತಿದೆ.
ಬಾಂಬ್ ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ವಕೀಲರು, ಕೋರ್ಟ್ ಸಿಬ್ಬಂದಿಗಳು ಭಯಭೀತರಾಗಿದ್ದಾರೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ತನಿಖೆ ಆರಂಭಿಸಿದ್ದಾರೆ.


