Karnataka NewsLatestPolitics

*ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಶಾಸಕ ಸುರೇಶ್ ಕುಮಾರ್ ಆಕ್ಷೇಪ*

https://www.facebook.com/share/v/1P59wgDPN3/

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಬಿಜೆಪಿ ಶಾಸಕರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸಲು ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧಾರಕ್ಕೆ ಹಿರಿಯ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ. ಇದ್ಯಾಕೋ ಸರಿಯಾದ ತೀರ್ಮಾನ ಎಂದೆನಿಸುತ್ತಿಲ್ಲ ಎಂದಿದ್ದಾರೆ.

Home add -Advt

ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ ತಾಯಿಯ ನಂತರ ನನಗಿರುವ ನಿಜವಾದ ಬಂಧು ಎಂದರೆ ಮಂಜುನಾಥ ಸ್ವಾಮಿ. ರಾಜಕಾರಣದಲ್ಲಿ ನಡೆದುಬಿಟ್ಟಿರುವ ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ದಯವಿಟ್ಟು ಬೇಡ. ಈ ಅಪಚಾರ ಮಾಡಿರುವವರು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಪಾಪ ಮಾಡಿದ್ದಾರೆ.

ಈಗಾಗಲೇ ಹಲವರು ಧರ್ಮಸ್ಥಳದ ಹಿರಿಮೆಯನ್ನು ಹಾಳು ಮಾಡುವ ಕೆಲಸವನ್ನು ಮಾಡುವುದರಲ್ಲಿ ವಿಕೃತಾನಂದ ಪಡೆದಿದ್ದಾರೆ. ಇಡೀ ನಾಡಿನ ಜನತೆ ನಂಬಿಕೆ ಇಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ, ಒಂದೊಮ್ಮೆ ಅಡ್ಡ ಮತದಾನ ಮಾಡಿದ ವೀರರು ಆಣೆ – ಪ್ರಮಾಣ ಮಾಡಿ ತಾವು ಉಳಿದುಕೊಳ್ಳಲು ತಮ್ಮ ನೈತಿಕ ದಿವಾಳಿತನ ತೋರಿಸಿದರೆ, ಅದರಿಂದ ಅಪಚಾರದ ಪ್ರಮಾಣ ಹೆಚ್ಚಾಗುತ್ತದಷ್ಟೇ. ದಯವಿಟ್ಟು ಸ್ವಾಮಿ ಮಂಜುನಾಥನ ಶ್ರೇಷ್ಠತೆಯನ್ನು ಈ ರೀತಿ ಒರೆ ಹಚ್ಚುವುದು ಯಾವುದೇ ಕಾರಣಕ್ಕೂ ಬೇಡ ಎಂದು ತಿಳಿಸಿದ್ದಾರೆ.

https://www.facebook.com/share/v/1P59wgDPN3/

Related Articles

Back to top button