Kannada NewsLatestWorld

*ಕತಾರ್‌ನ ಬರ್ಜಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ: 18 ಜನರು ನಾಪತ್ತೆ*

54 ಜನರಿಗೆ ಗಂಭೀರ ಗಾಯ

Home add -Advt


ಪ್ರಗತಿವಾಹಿನಿ ಸುದ್ದಿ: ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ.

ಸ್ಥಾವರದಲ್ಲಿ ಹೊಸ ಕಾರ್ಯಾಚರಣೆ ಆರಂಭವಾಗುವ ಸಮಯದಲ್ಲಿ ಈ ಘಟಬೆ ನಡೆದಿದ್ದು, 54 ಜನರು ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣವೇ ಉನ್ನತ ಮಟ್ಟದ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ.

ದೇಶದ ಇಂಧನ ಅಗತ್ಯಗಳನ್ನು ಪೂರೈಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬರ್ಜಾನ್ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗುತ್ತಿದ್ದಂತೆಯೇ ಈ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ ಸ್ವಾಮ್ಯದ ‘ಕತಾರ್ ಎನರ್ಜಿ’ ಸಂಸ್ಥೆ ದೃಢಪಡಿಸಿದೆ. ಸ್ಫೋಟದ ತೀವ್ರತೆಗೆ ನಾಪತ್ತೆಯಾಗಿರುವ 18 ಜನರಿಗಾಗಿ ಅವಶೇಷಗಳ ಅಡಿ ಹುಡುಕಾಟ ನಡೆಸಲಾಗುತ್ತಿದೆ.

Related Articles

Back to top button