Belagavi NewsBelgaum NewsKannada NewsKarnataka NewsPolitics

*ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿ: ಬೆಂಬಲಿಗರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಡಿಸಿಎಂ ಹಾಗೂ ಹಾಲಿ ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು  ಗಾಣಿಗ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ

ಇಂದು ಬೆಳಗಾವಿಯಲ್ಲಿ ಗಾಣಿಗ ಸಮಾಜ ಮುಖಂಡರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು‌. ಪ್ರತಿಭಟನಾ ರ್ಯಾಲಿಯನ್ನು ನಗರದ ರಾಣಿ ಚೆನ್ನಮ್ಮ ವೃತ್ತದಿಂದ ನಡೆಸಲಾಯಿತು. ಬಳಿಕ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ವೇಳೆ ಸಮಾಜದ ಮುಖಂಡರು ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದ ವಿಸ್ತರಣೆಯ ವೇಳೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು.

ಸಂಪುಟ ವಿಸ್ತರಣೆಯ ವೇಳೆ ಗಾಣಿಗ ಸಮಾಜದ ಹಿರಿಯರಾದ ಮಾಜಿ ಡಿಸಿಎಂ ಮತ್ತು ಹಾಲಿ ಅಥಣಿಯ ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು. ಕರ್ನಾಟಕದಲ್ಲಿ ಸುಮಾರು 40 ರಿಂದ 50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಸ್ವಾತಂತ್ರ್ಯ ನಂತರ ನಮ್ಮ ಸಮಾಜಕ್ಕೆ ಇಲ್ಲಿಯ ವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸಚಿವ ಸ್ಥಾನವನ್ನು ನೀಡಿಲ್ಲ. ಒಂದು ವೇಳೆ ಗಾಣಿಗ ಸಮಾಜಕ್ಕೆ ಸಚಿವ ಸ್ಥಾನ ನೀಡದಿದ್ದರೇ, ಮುಂಬರುವ ದಿನಗಳಲ್ಲಿ ಗಾಣಿಗ ಸಮಾಜದಿಂದ ಕಠಿಣ ತಿರ್ಮಾನ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದರು.

Home add -Advt

ಗಾಣಿಗ ಸಮಾಜದ ಅತ್ಯಂತ ಹಿಂದುಳಿದ ಸಮಾಜವಾಗಿದೆ. ಈ ಸಮಾಜದವರೇ ಆದ ಲಕ್ಷ್ಮಣ್ ಸವದಿ ಅವರು ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ವಿಸ್ತರಣೆಯಲ್ಲಿ ಲಕ್ಷ್ಮಣ್ ಸವದಿ ಅವರನ್ನು ಗಂಭೀರವಾಗಿ ಪರಿಗಣಿಸಬೇಕು. 

ಸಂಪೂರ್ಣ ಸಮಾಜ ಅವರ ಬೆಂಬಲಿಕ್ಕಿದು, ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೇ ರಾಜ್ಯಾದ್ಯಂತ ಗಾಣಿಗ ಸಮಾಜದಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಕೆಯನ್ನು ನೀಡಿದರು.

Related Articles

Back to top button