Kannada NewsLatestNational

*ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ವೊಂದರಲ್ಲಿ ಸಂಭವಿಸುದ ಭಾರಿ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನ ಖಾಸಗಿ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಈವರೆಗೆ 15 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 14 ಮೃತದೇಹಗಳನ್ನು ಕಟ್ಟಡದಿಂದ ಹೊರತೆಗೆದಿದ್ದಾರೆ.

ಪ್ರಸ್ತಿತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಕಟ್ಟಡ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ಕಟ್ಟಡ ಒಳಗೆ ಹಲವು ವಿದ್ಯಾರ್ಥಿಗಳು, ಶಿಕ್ಷಕರು ಸಿಲುಕಿಕೊಂಡಿದ್ದು, ಅವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Home add -Advt

ಕೋಚಿಂಗ್ ಸೆಂಟರ್ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಹಿಸಲಾರದ ಘಟನೆ ಇದಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಧನವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಗೊಂಡ ಎಲ್ಲರಿಗೂ ಉಚಿತ ಮತ್ತು ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಸ್ಥಳೀಯ ಆಡಳಿತಕ್ಕೆ ಆದೇಶ ನೀಡಿದ್ದಾರೆ.


Related Articles

Back to top button