Karnataka NewsLatestPolitics

*ಚರ್ಚೆಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚಿಸಲು ವಿಧಾನಸೌಧಕ್ಕೆ ಬರುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ತಾವು ಆರಂಭಿಸಿದ ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ನಾನು ಚರ್ಚಿಸಲು ಉತ್ಸುಕನಾಗಿದ್ದು, ದಿನಾಂಕ 26.06.2026ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧಕ್ಕೆ ತಾವು ಹಾಗೂ ತಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸುವಂತೆ ತಮ್ಮನ್ನು ಕೋರುತ್ತೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನಿಸಿದ್ದಾರೆ.

Home add -Advt


Related Articles

Back to top button