Kannada NewsKarnataka NewsNational
*ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾದ ಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ : ಆದಿಚುಂಚನಗಿರಿ ಶಾಖಾ ಮಠದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾದರು.
ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ತೆರಳಿ ಅವರು ಸೋಮವಾರ ರಾತ್ರಿ ಭೇಟಿಯಾದರು. ಈ ಸಂದರ್ಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಶಾಸಕ ರವಿ ಗಣಿಗ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.
ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿದ್ದರಿಂದ, ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇವೆಯೇ ಹೊರತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸಚಿವರು ಮತ್ತು ಶಾಸಕರು ತಿಳಿಸಿದ್ದಾರೆ.




