Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಅಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ .

Home add -Advt

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದದಲ್ಲಿ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

Related Articles

Back to top button