Belagavi NewsBelgaum NewsKannada NewsKarnataka News

*ಬೈಕ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ:  ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ನಗರದ ನಾಥಪೈ ವೃತ್ತದ ಬಳಿ ನಡೆದಿದೆ.

ಬೈಕ್ ಸವಾರ ಗಣೇಶ ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಹಿಂಬದಿ ಕುಳಿತಿದ್ದ ಆತನ ಸ್ನೇಹಿತನಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ಟ್ರಕ್ ಚಾಲಕ ಅಪಘಾತವಾಗುತ್ತಿದ್ದಂತೆಯೇ ಸ್ಥಳದಿಂದ ಪರಾರಿಯಾಗಿದ್ದಾನೆ. ದಕ್ಷಿಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button