Belagavi NewsBelgaum NewsHealthKannada News

*ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ವಾರವಿಡೀ ಮಳೆಯ ಅಬ್ಬರ ಜೋರಾಗಿರಲಿದ್ದು, ಜೂನ್ 27 ರಿಂದ 29 ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.

Home add -Advt

ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಜೂನ್ 24 ರಿಂದ 29 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಬುಧವಾರ ಜೋರು ಮಳೆಯಾಗುವ ಮುನ್ಸೂಚನೆ ಇದ್ದು ಜೂನ್ 24 ರಿಂದ 26 ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

Related Articles

Back to top button