Karnataka NewsLatestPolitics

*ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ.

ಯಾವ ಸಚಿವರಿಗೆ ಯಾವ ಜಿಲ್ಲೆಯ ಜವಾಬ್ದಾರಿ ಇಲ್ಲಿದೆ ಮಾಹಿತಿ.

ಸಚಿವರು ಮತ್ತು ಹಂಚಿಕೆಯಾಗಿರುವ ಜಿಲ್ಲೆಗಳ ವಿವರ ಪಟ್ಟಿ:

Home add -Advt

ಡಾ. ಜಿ. ಪರಮೇಶ್ವರ (ಡಿಸಿಎಂ) – ತುಮಕೂರು ಮತ್ತು ಚಿತ್ರದುರ್ಗ
ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ
ರಾಮಲಿಂಗಾರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ
ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ
ಡಾ. ಯತೀಂದ್ರ ಸಿದ್ದರಾಮಯ್ಯ – ಮೈಸೂರು ಮತ್ತು ಚಾಮರಾಜನಗರ
ಯು.ಟಿ. ಖಾದರ್ – ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ
ಎಂ.ಬಿ. ಪಾಟೀಲ್ – ವಿಜಯಪುರ ಮತ್ತು ಬಾಗಲಕೋಟೆ
ಪ್ರಿಯಾಂಕ್ ಖರ್ಗೆ – ಕಲಬುರಗಿ ಮತ್ತು ಯಾದಗಿರಿ
ಸತೀಶ್ ಜಾರಕಿಹೊಳಿ – ಬೆಳಗಾವಿ, ಧಾರವಾಡ ಮತ್ತು ಹಾವೇರಿ
ಕೆ.ಜೆ. ಜಾರ್ಜ್ – ಚಿಕ್ಕಮಗಳೂರು ಮತ್ತು ದಾವಣಗೆರೆ
ಈಶ್ವರ ಖಂಡ್ರೆ – ಬೀದರ್ ಮತ್ತು ಗದಗ
ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ
ಡಾ. ಶರಣಪ್ರಕಾಶ್ ಪಾಟೀಲ್ -ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಂಚಲಾಗಿದೆ.

Related Articles

Back to top button