Belagavi NewsBelgaum NewsKannada NewsKarnataka News

*ಜೂ. 28ರ ವರೆಗೆ ರಾಜ್ಯಾದ್ಯಂತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರ ಮಾರುತಗಳು ಮತ್ತೆ ಚುರುಕುಗೊಂಡಿವೆ. ಜೂನ್ 28ರ ವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಕಲ್ಬುರ್ಗಿ, ಯಾದಗಿರಿ, ಬೀದರ್, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮುಂಗಾರು ಕೊಂಚ ಬಿರುಸು ಪಡೆದುಕೊಂಡಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಿರುಗಾಳಿ ಸಹಿತ ಮಳೆ ಬರುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತೆ ವಹಿಸಲು ಕೋರಲಾಗಿದೆ.

ಇನ್ನು ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣ ಮುಂದುವರಿಯಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button