Kannada NewsKarnataka NewsLatest
*ಹೊಸ ಬೈಕ್ ಖರೀದಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹೊಸ ಬೈಕ್ ಖರೀದಿಸಿದ ಮರುದಿನವೇ ಭೀಕರ ಅಪಘಾತಕ್ಕೀಡಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಈ ದುರಂತ ನಡೆದಿದೆ. ನಂದೀಶ್ ಕುಮಾರ್ (19) ಮೃತದುರ್ದೈವಿಯಾಗಿದ್ದು, ವೇಗವಾಗಿ ಬಂದ ಟಿಪ್ಪರ್ ಬೈಕ್ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂದೀಶ್ ಮೂಲತಃ ಪಾವಗಡದ ದೊಡ್ಡಹಳ್ಳಿ ನಿವಾಸಿ ಎಂಬುದು ಗೊತ್ತಾಗಿದೆ.
ನಿನ್ನೆಯಷ್ಟೇ ಹೊಸ ಬೈಕ್ ಖರೀದಿಸಿದ್ದ ನಂದೀಶ್ ಕುಮಾರ್ ಸ್ನೇಹಿತನ ಜೊತೆ ಸ್ವಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ವೈಎನ್ ಹೊಸಕೋಟೆ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಬೈಕ್ಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ನಂದೀಶ್ ಮೃತಪಟ್ಟಿದ್ದರೆ ಹಿಂಬದಿ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಾದ್ದಾನೆ. ಘಟನೆ ಸಂಬಂಧ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




