*ರಾಮ ಮಂದಿರ ದೇಣಿಗೆ, ಕಾಣಿಕೆ ಕಳ್ಳತನ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ಶ್ರೀ ರಾಮ ಮಂದಿರ ದೇಣಿಗೆ ಹಾಗೂ ಕಾಣಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) 8 ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಈ ಬೆಳವಣಿಗೆ ಬೆನ್ನಲ್ಲೇ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಚಂಪತ್ ರಾಯ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚಂಪತ್ ರಾಯ್ ರಾಮ ಜನ್ಮಭೂಮಿಗಾಗಿ ಹೋರಾಟಾದಲ್ಲಿ ಭಾಗವಹಿಸಿದ್ದ ಪ್ರಮುಖರು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಪತ್ ರಾಯ್ ಅವರ ಆಪ್ತ ಸಹಾಯಕ ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಚಂಪತ್ ರಾಯ್ ಹಾಗೂ ಟ್ರಸ್ಟ್‌ನ ಪ್ರಮುಖ ಸದಸ್ಯರಾದ ಅನಿಲ್ ಮಿಶ್ರಾ ರಾಜೀನಾಮೆ ಇಬ್ಬರೂ ರಾಜೀನಾಮೆ ನೀಡಿದ್ದಾರೆ.
ಇನ್ನು ಬಂಧಿತ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಮತ್ತು ನಗದು ಹಣವನ್ನು ಎಣಿಕೆ ಮಾಡುವ ಪ್ರಕ್ರಿಯೆಯಲ್ಲಿದ್ದ ಸಿಬ್ಬಂದಿಯಾಗಿದ್ದರು. ಸ್ವತಃ ಚಂಪತ್ ರಾಯ್ ಅವರ ಅತ್ಯಂತ ಆಪ್ತ ಸಹಾಯಕನೇ ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಜೈಲು ಪಾಲಾಗಿರುವುದರಿಂದ, ಇಡೀ ಹಗರಣದ ನೈತಿಕ ಹೊಣೆ ಹೊತ್ತು ಅಥವಾ ತನಿಖೆಯ ತೀವ್ರತೆಗೆ ಹೆದರಿ ಈ ಇಬ್ಬರು ಪ್ರಮುಖರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.




