CrimeKannada NewsKarnataka NewsTravel

*ಮಂತ್ರಾಲಯಕ್ಕೆ ಹೊರಟ್ಟಿದ್ದ ಓಮ್ನಿ ಕಾರು ಅಪಘಾತ: ಐವರು ಸಾವು*

ಪ್ರಗತಿವಾಹಿನಿ ಸುದ್ದಿ : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಓಮ್ನಿ ಕಾರು ಮತ್ತು ಅಶೋಕ್ ಲೇಲ್ಯಾಂಡ್ ಲಾರಿ ನಡುವೆ ಈ ದುರ್ಘಟನೆ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು (ಡಿವೈಡರ್) ದಾಟಿ ಎದುರಿನಿಂದ ಬರುತ್ತಿದ್ದ ಓಮ್ಮಿ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಓಮ್ಮಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. 

ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು.

Home add -Advt

ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಧಾವಿಸಿ, ಕಾರಿನೊಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button