
ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೌತರಿಂದ ಪರ ಹಾಗೂ ವಿರೋಧ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೈರಮಂಗಲಕ್ಕೆ ಆಗಮಿಸಿದ್ದಾರೆ.
ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಬಿಡದಿ ಟೌನ್ ಶಿಪ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೈ ಸನ್ನೆ ಮಾಡಿ ಮುಂದೆ ಸಾಗಿದ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕೇಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಕೇವಲ ಸಸಿನಡುವುದಷ್ಟೆ ಅಲ್ಲ, ಬೆಂಗಳೂರು ಉಳಿಸುವ ಕೆಲಸವಾಗಬೇಕು ಎಂದರು. ಟೌನ್ ಶಿಪ್ ವಿರೋಧಿಸಿ ರೈತರು 480 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯರು, ವೃದ್ಧರು ಸೇರಿದಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದೆ. ಸಿಎಂ ಅವರನ್ನು ಬೀದಿಯಲ್ಲಿ ನಿಲ್ಲಿಸಬೇಕೆಂಬ ಉದ್ದೇಶವಿಲ್ಲ. ಬಾಧಿತ ರೈತರ ಜೊತೆ ಮುಕ್ತವಾಗಿ ಚರ್ಚೆ ನಡೆಸಲಿ, ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಲಿ ಎಂದು ಆಹ್ವಾನಿಸಿದ್ದೆ ಎಂದು ಹೇಳಿದರು.




