Kannada NewsKarnataka NewsLatest

*ಎನ್ ಐಎ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರ ಸುಹೇಲ್*

ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧನಕ್ಕೊಳಗಾಗಿದ್ದ ಶಂಕಿತ ಉಗ್ರ ಸುಹೇಲ್‌ನ ವಶಕ್ಕೆ ಪಡೆದಿರುವ ರಾಷ್ಟ್ರೀಯ ತನಿಖಾ ದಳ (NIA) ತೀವ್ರ ವಿಚಾರಣೆ ನಡೆಸಿದೆ.

ವಿಚರಣೆ ವೇಳೆ ಅಯೋಧ್ಯೆಯ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರ ಬೆನ್ನಲ್ಲೇ, ಶುಕ್ರವಾರ ಹರಿಹರಕ್ಕೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ವಿಶೇಷ ತಂಡವು ಶಂಕಿತ ಉಗ್ರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದೆ.

ಎನ್‌ಐಎ ಅಧಿಕಾರಿಗಳು ಶಂಕಿತ ಉಗ್ರ ಸುಹೇಲ್‌ನನ್ನು ಸುಮಾರು ಒಂದು ಗಂಟೆಯ ಕಾಲ ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ತಿಳಿಸಿದ್ದಾರೆ. ವಿಚಾರಣೆ ವೇಳೆ ಆತನ ಸಾಮಾಜಿಕ ಜಾಲತಾಣಗಳ ಖಾತೆಗಳು, ಸಂಶಯಾಸ್ಪದ ಇಂಟರ್ನೆಟ್ ಚಟುವಟಿಕೆಗಳು ಹಾಗೂ ಇತರ ಪ್ರಮುಖ ಬ್ಯಾಂಕ್ ಖಾತೆಗಳ ವಹಿವಾಟು ಸೇರಿದಂತೆ ವಿವಿಧ ಆಯಾಮಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

Home add -Advt

ಬನ್ನಿಕೋಡು ಗ್ರಾಮದ ಗುಟ್ಯಪ್ಪ ಎಂಬುವವರ ಮನೆಯಲ್ಲಿದ್ದ ಶಂಕಿತ ಉಗ್ರ ಸುಹೇಲ್​ನನ್ನು ಇತ್ತೀಚೆಗೆ ವಶಕ್ಕೆ ಪಡೆಯಲಾಗಿತ್ತು. ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಪೇಂಟಿಂಗ್ ಕೆಲಸಕ್ಕಾಗಿ ಬಂದಿದ್ದ 10 ಜನರ ತಂಡದಲ್ಲಿ ಈ ಸುಹೇಲ್ ಮಾತ್ರ ಅತ್ಯಂತ ಸಕ್ರಿಯನಾಗಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಸ್ಥಳೀಯ ಪೊಲೀಸರು ಹಾಗೂ ಎನ್‌ಐಎ ಜಂಟಿ ಕಾರ್ಯಾಚರಣೆಯ ಬಳಿಕ ಆರೋಪಿ ಸುಹೇಲ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆತನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪೊಲೀಸ್ ಕಸ್ಟಡಿಯ ಅವಧಿಯಲ್ಲಿ ಈತನ ದೇಶದ್ರೋಹಿ ಸಂಚು ಹಾಗೂ ಅಂತಾರಾಷ್ಟ್ರೀಯ ಲಿಂಕ್‌ಗಳ ಬಗ್ಗೆ ಇನ್ನಷ್ಟು ಆಳವಾದ ತನಿಖೆ ನಡೆಯಲಿದೆ.

Related Articles

Back to top button