Kannada NewsKarnataka NewsNationalPolitics

*ರಾಮ ಮಂದಿರ ಭ್ರಷ್ಟಾಚಾರದ ಬಗ್ಗೆ ಮನ್ ಕೀ ಬಾತ್ ಯಾವಾಗ? ಮೋದಿ ವಿರುದ್ಧ ಖರ್ಗೆ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಚರ್ಚೆಗೆ ಗ್ರಾಸವಾಗಿರುವ ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆಗಿರುವ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮನ್ ಕೀ ಬಾತ್ ಯಾವಾಗ ಮಾಡುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್  ಖರ್ಗೆ ಲೇವಡಿ ಮಾಡಿದರು.

ಬೆಂಗೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂದಿರದ ಪ್ರಾಣ ಪ್ರತಿಷ್ಠಾಪನೆ ಹಾಗೂ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ ಅವರು, ಅಲ್ಲಿ ಹಣದ ದುರುಪಯೋಗ ಆಗಿಲ್ಲ ಎಂದು ಹೇಗೆ ನಂಬುತ್ತಾರೆ? ಕೇವಲ ಐದು ವರ್ಷಗಳಲ್ಲಿ ಐದು ನೂರು ಕೋಟಿ ರೂಪಾಯಿಗಳಷ್ಟು ಲೂಟಿ ಮಾಡಲಾಗಿದೆ. “ನಾನು ತಿನ್ನಲ್ಲ ತಿನ್ನಲು ಬಿಡಲ್ಲ” ಎಂದು ಹೇಳುತ್ತಿದ್ದವರು ಈಗ ರಾಮನ ಹೆಸರಿನಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಈ ಹಗರಣದ ಬಗ್ಗೆ ಪ್ರಧಾನಿಯವರು ಯಾವಾಗ ‘ಮನ್ ಕೀ ಬಾತ್’ ಅಥವಾ ‘ಪರೀಕ್ಷಾ ಪೇ ಚರ್ಚೆ ನಡೆಸುತ್ತಾರೆ ಎಂದು ಪ್ರಶ್ನಿಸಿದ ಅವರು, ಪ್ರತಿಯೊಂದು ತಪ್ಪಿಗೂ ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷದ ರಾಮಭಕ್ತರನ್ನು ಹೊಣೆ ಮಾಡಲಾಗುತ್ತಿದೆ, ಹಾಗಾದರೆ ಈ ಭ್ರಷ್ಟಾಚಾರದಲ್ಲಿ ಬಿಜೆಪಿಯವರ ಪಾತ್ರವಿಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯ ರಾಜಕಾರಣದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಈ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದರು. ಮುಂದಿನ ಒಂದು ವಾರ ಅಥವಾ ಹತ್ತು ದಿನಗಳ ಒಳಗಾಗಿ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಂಪುಟವು ಪೂರ್ಣ ಪ್ರಮಾಣದಲ್ಲಿ ಭರ್ತಿಯಾದರೆ ಸರ್ಕಾರವನ್ನು ಇನ್ನಷ್ಟು ಸುಗಮವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಸಲು ಅನುಕೂಲವಾಗುತ್ತದೆ. ಮುಖ್ಯಮಂತ್ರಿಗಳ ನಿರ್ಧಾರದಂತೆ ಶೀಘ್ರದಲ್ಲೇ ಈ ಪ್ರಕ್ರಿಯೆ ಮುಗಿಯಲಿದೆ ಎಂದು ಅವರು ಮಾಹಿತಿ ನೀಡಿದರು.

Home add -Advt

Related Articles

Back to top button