Belagavi NewsBelgaum NewsKannada NewsKarnataka News

*ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ 

ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಿರುಗಾಳಿ ಹಾಗೂ ಭಾರಿ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ತೀರದ ಸಾರ್ವಜನಿಕರು ಮತ್ತು ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿಯ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Home add -Advt

ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮತ್ತೊಂದೆಡೆ, ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Related Articles

Back to top button