Karnataka NewsLatestPolitics

*ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ 6 ವರ್ಷ ಉಚ್ಚಾಟನೆ*

ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಂ.ಜಿ.ಮಹೇಶ್, ಕೀಳುಮಟ್ಟದ, ಅವಹೇಳನಕಾರಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಕ್ಕಾಗಿ ಮಹೇಶ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ಕ್ರಮ ಕೈಗೊಂಡಿದೆ.

ರಾಜ್ಯ ಶಿಸ್ತು ಸಮಿತಿಯು ಈ ಹಿಂದೆ ಎಂ.ಜಿ.ಮಹೇಶ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು. ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಉತ್ತರ ತೃಪ್ತಿಕರವಾಗಿಲ್ಲದ ಕಾರಣ ಅವರನ್ನು ಉಚ್ಚಾಟಿಸಲಾಗಿದೆ.

Home add -Advt

Related Articles

Back to top button