Belagavi NewsBelgaum NewsCrimeKannada NewsKarnataka NewsNationalPolitics
*ಬೆಳಗಾವಿಯಲ್ಲೋಬ್ಬ ಸೈಕೋ: ಅಪಾರ್ಟ್ಮೆಂಟ್ ಗೆ ನುಗ್ಗಿ ಬಟ್ಟೆ ಕದಿಯಲು ಯತ್ನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಗಲು ಹೊತ್ತಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಪಾರ್ಟ್ಮೆಂಟ್‌ಗೆ ನುಗ್ಗಿ ಒಣ ಹಾಕಿರುವ ಬಟ್ಟೆಗಳನ್ನು ಕದಿಯಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಬೆಳಗಾವಿ ನಗರದ ಬಸವನ ಗಲ್ಲಿ ಪ್ರದೇಶದ ಸಮರ್ಥ ನಗರದಲ್ಲಿನ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ವಿಡಿಯೋ ಸೆರೆಯಾಗಿದೆ.
ಶಂಕಿತ ವ್ಯಕ್ತಿ ಅಪಾರ್ಟ್ಮೆಂಟ್ ಗೆ ಪ್ರವೇಶಿಸಿ ಎರಡನೇ ಮಹಡಿಯಲ್ಲಿ ನಡೆದುಕೊಂಡು ಹೋಗಿದ್ದಾನೆ. ಬಳಿಕ ಒಣಗುತ್ತಿದ್ದ ಬಟ್ಟೆಗಳನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಆದರೆ, ಯಾರೊ ಬಂದಿದ್ದನ್ನು ನೋಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಘಟನೆಯ ನಂತರ, ಅಪಾರ್ಟ್ಮೆಂಟ್ ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ನಿವಾಸಿ ಮತ್ತು ಸಾಮಾಜಿಕ ಕಾರ್ಯಕರ್ತ ಅವಧೂತ್ ತುಡ್ವೇಕರ್ ಖಾಡೆ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




