Kannada NewsKarnataka NewsLatest
*ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು, ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಸಿಲಿಂಡರ್ ಸ್ಫೊಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಜಿಲ್ಲಾಸಪತ್ರೆಯಲ್ಲಿ ಆತಂಕದ ಸೃಷ್ಟಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಆಕ್ಸಿಜನ್ ಸಿಲಿಂಡರ್ ಸ್ಫೋಟ, ಬೆಂಕಿ ಅವಘಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




