Kannada NewsKarnataka NewsPolitics

*15 ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ: ಎಂ.ಬಿ ಪಾಟೀಲ್*

ಪ್ರಗತಿವಾಹಿನಿ ಸುದ್ದಿ : ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. 

ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು. 

ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ?” ಎಂದು ಮರುಪ್ರಶ್ನಿಸಿದರು. ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ತಮ್ಮ ಕೈಯಲ್ಲಿ ಎನು ಇಲ್ಲ ಎಂದರು. 

Home add -Advt

Related Articles

Back to top button