Kannada NewsKarnataka NewsLatest
*ಮಾಜಿ ಸಚಿವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ವೀರಣ್ಣ ಅವರನ್ನು ಸಿದ್ದರಾಮಯ್ಯ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಶಾಸಕರಾದ ರಿಜ್ವಾನ್ ಅರ್ಷದ್, ಹನೂರು ಮಂಜುನಾಥ್, ವೀರಣ್ಣ ಅವರ ಅಳಿಯ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ಹಾಜರಿದ್ದರು.
ವೀರಣ್ಣ ಹಾಗೂ ಸಿದ್ದರಾಮಯ್ಯ ಅವರು ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.




