Belagavi NewsBelgaum NewsCrimeKannada NewsKarnataka News

*ಇಬ್ಬರು ಬೈಕ್ ಕಳ್ಳರ ಬಂಧನ: 4 ಲಕ್ಷ ಮೌಲ್ಯದ ಬೈಕ್ ಗಳು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ ಬೆಳಗಾವಿ ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ವೇಳೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಕಳುವಾಗಿದ್ದ ಒಟ್ಟು 8 ಮೋಟಾರ್ ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಮುತ್ತಪ್ಪ @ ಮುತ್ತು ಬೆಳಗಲಿ ಹಾಗೂ ಯಮನಪ್ಪ ಯಲ್ಲಪ್ಪ ದೊಡಮನಿ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ನಡೆಸಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ. ಗೋಕಾಕ ಪೊಲೀಸರ ಕಾರ್ಯಚರಣೆಗೆ ಎಸ್ ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button