ಸಿಎಂ ವರಿಷ್ಠರ ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ಹೈಕಮಾಂಡ್ ನಾಯಕರಾದ ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಆದರೂ ಯಾವುದೇ ಪ್ರಯೋಜನೆಯಾಗಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಂತಿಮ ಚರ್ಚೆ ನಡೆದಿಲ್ಲ.

ವರಿಷ್ಠರು ಮತ್ತೆದೆ ಹಳೆ ರಾಗಾ ಎಳೆದಿದ್ದು, ನಾಳೆ ಬಾ ಎನ್ನುವ ನಿಲುವಿನ ಉತ್ತರ ನೀಡಿದ್ದಾರೆ. ಗುರುವಾರ ರಾತ್ರಿ ಚರ್ಚೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂದು ಸಂಸತ್ತಿನ ಜಂಟಿ ಅಧಿವೇಶನ ಬಳಿಕ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಎಸ್‍ವೈ ಭೇಟಿ ಮಾಡಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶುಕ್ರವಾರ ಬೆಳಗ್ಗೆ ಅಮಿತ್‌ ಶಾ ಅವರನ್ನು ಪುನಃ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಇಂದಿನಿಂದ ಸಂಸತ್‌ನಲ್ಲಿ ಜಂಟಿ ಅಧಿವೇಶನ ಆರಂಭವಾಗಿದ್ದು, ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿದೆ. ಸಂಜೆ 4 ಗಂಟೆಗೆ ಅಮಿತ್‌ ಶಾ ದೆಹಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ ನಡುವೆ ಬಿಎಸ್‌ವೈಗೆ ಸಂಪುಟ ವಿಸ್ತರಣೆ ಕುರಿತಾಗಿ ಚರ್ಚಿಸಲು ಅವಕಾಶ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button