Belagavi NewsBelgaum NewsKannada NewsKarnataka NewsNationalPolitics
*ಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಜಲಪಾತಗಳಿಗೆ ಸಾರ್ವಜನಿಕರು ಭೇಟಿ ನೀಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಮತ್ತು ಬೆಳಗಾವಿ ಜಲಪಾತಗಳಿಗೆ ಸದ್ಯ ಸಾರ್ವಜನಿಕರ ಪ್ರವೇಶದ ನಿರ್ಭಂದವಿರುತ್ತದೆ. ಅರಣ್ಯ ಪ್ರದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಇಲಾಖಾ ಸಿಬ್ಬಂದಿಗಳನ್ನು ಸಾರ್ವಜನಿಕರ ಸುರಕ್ಷತೆಗಾಗಿ ನಿಯೋಜಿಸಲಾಗಿರುತ್ತದೆ.
ಸಾರ್ವಜನಿಕರು ಆದೇಶ ಮೀರಿ ಅರಣ್ಯ ಪ್ರದೇಶದ ಅಪಾಯಕಾರಿ ಜಲಪಾತಗಳಿಗೆ ಭೇಟಿ ನೀಡಲು ಪ್ರಯತ್ನಿಸಿದರೆ. ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಬೆಳಗಾವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಎಚ್ಚರಿಸಿದ್ದಾರೆ.




