Karnataka NewsLatestPolitics

*ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಸಾವು: ಮೂವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದಲ್ಲಿ ಕಾವೇರಿ ಕ್ವಾರಿಯಲ್ಲಿ ಬೃಹತ್ ಕಲ್ಲುಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಮತ್ತು ಲೋಕಲ್ ಇನ್‌ಚಾರ್ಜ್ ರಾಜು ಬಂಧಿತರು. ಬಸವೇಶ್ವರ ಕ್ರಷರ್ ಅನ್ನು ಲೀಸ್‌ಗೆ ಪಡೆದಿದ್ದ ಪಾಂಡುರಂಗ ಸೇರಿದಂತೆ ಮೂವರನ್ನು ತನಿಖೆಗೆ ಒಳಪಡಿಸಲಾಗಿದೆ.

ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್ ಮತ್ತು ಬಸವೇಶ್ವರ ಕ್ರಷರ್ ಮಾಲೀಕ ಡಿ.ಆನಂದಸ್ವಾಮಿ ಇನ್ನೂ ಬಂಧನವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಾದಪಟ್ಟಣ ಗ್ರಾಮದ ಬಳಿಯ ಕಾವೇರಿ ಕ್ರಷರ್‌ನಲ್ಲಿ ನಡೆದ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಎಂದು ಗುರುತಿಸಲಾಗಿದೆ.

Home add -Advt

Related Articles

Back to top button