Belagavi NewsBelgaum NewsKannada NewsKarnataka News

*ಮಳೆಗೆ ರಸ್ತೆಗೆ ಬಿದ್ದ ಮರಗಳು: ಪಾಲಿಕೆ ಸಿಬ್ಬಂದಿಯಿಂದ ತುರ್ತು ತೆರವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಗಾಳಿ ಮಳೆಯ ರಭಸಕ್ಕೆ ನಗರದ ಹಲವು ಪ್ರದೇಶಗಳಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದಾಗಿ ಕುಮಾರಸ್ವಾಮಿ ಬಡಾವಣೆ ಸೇರಿದಂತೆ ವಿವಿಧೆಡೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಯಿತು.

ಸುದ್ದಿ ತಿಳಿದ ತಕ್ಷಣವೇ ಮಹಾನಗರ ಪಾಲಿಕೆಯ ವಿಪತ್ತು ನಿರ್ವಹಣಾ ಸಿಬ್ಬಂದಿಯ ತಂಡ ಸ್ಥಳಕ್ಕೆ ಆಗಮಿಸಿತು. ಪಾಲಿಕೆಯ ಪರಿಸರ ವಿಭಾಗದ ಅಭಿಯಂತರ ಹಣಮಂತ ಕಲಾದಗಿ ಅವರ ನೇತೃತ್ವದಲ್ಲಿ ಸಿಬ್ಬಂದಿಯು ತುರ್ತು ಕಾರ್ಯಾಚರಣೆ ನಡೆಸಿ ಯಂತ್ರೋಪಕರಣಗಳ ಸಹಾಯದಿಂದ ಕಡಿಮೆ ಅವಧಿಯಲ್ಲಿ ರಸ್ತೆಗೆ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿದರು. ಸಂಚಾರ ಪುನಃ ಸಹಜ ಸ್ಥಿತಿಗೆ ಬಂದಿತು. ತಕ್ಷಣವೇ ಸ್ಪಂದಿಸಿದ ಪಾಲಿಕೆಯ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. 

ಗಾಳಿ ಮಳೆಗೆ ಉರುಳಿ ಬಿದ್ದು ಅಪಾಯ ತಂದೊಡ್ಡುವ ಮರಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ಪಾಲಿಕೆ ಅಭಿಯಂತರ ಹಣಮಂತ ಕಲಾದಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Home add -Advt

Related Articles

Back to top button