Belagavi NewsBelgaum NewsCrimeLatest

*ಬೆಳಗಾವಿಯಲ್ಲಿ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ:  ಬಜರಂಗದಳ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಡ ಕುಟುಂಬಗಳಿಗೆ ಆಮಿಷವೊಡ್ಡಿ ಕಾನೂನುಬಾಹಿರವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂದು ಬಜರಂಗದಳದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದೆ.

ಮನೆಯೊಂದರಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆ ಸಲ್ಲಿಸುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ಬಜರಂಗದಳದ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ವಿಡಿಯೋ ಸೆರೆಹಿಡಿದ ಕಾರ್ಯಕರ್ತರು, ಮತಾಂತರ ಯತ್ನ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಜರಂಗದಳದ ಮುಖಂಡರು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಇಂತಹ ಕಾನೂನುಬಾಹಿರ ಧಾರ್ಮಿಕ ಚಟುವಟಿಕೆಗಳಿಗೆ ತಕ್ಷಣವೇ ಬ್ರೇಕ್ ಹಾಕಬೇಕು ಮತ್ತು ಶಾಂತಿ ಕದಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಂದಗಡ ಪೊಲೀಸರು ಕಕ್ಕೇರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ “ನಾವು ಮತಾಂತರ ಆಗಿಲ್ಲ” ಎಂದು ಸಂಬಂಧಪಟ್ಟ ಕುಟುಂಬದ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

Home add -Advt

Related Articles

Back to top button