Belagavi NewsBelgaum NewsKannada NewsKarnataka NewsNationalPolitics

*ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ತಂಡ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂಧಿ ದಾಳಿ ನಡೆಸಿ ಒಟ್ಟು 4,96,000 ರೂ ಮೌಲ್ಯದ 24.80 ಗ್ರಾಂ ಹೆರಾಯಿನ್ ವಶಕ್ಕೆ ಪಡೆದು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button